ಜನಪ್ರಿಯ ಒಪ್ಪೋ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಿರುವ Oppo F33 5G ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಈ ಮೊಬೈಲ್ ಇದೀಗ ಫ್ಲಿಪ್‌ಕಾರ್ಟ್ ಹಾಗೂ ಅಮೆಜಾನ್ ಇ ಕಾಮರ್ಸ್ ತಾಣಗಳಲ್ಲಿ Pre-order ಗೆ ಲಭ್ಯ ಇದೆ. ಅಂದಹಾಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, 50MP ಪ್ರಾಥಮಿಕ ಕ್ಯಾಮೆರಾ ಸೆನ್ಸಾರ್ ಅನ್ನು ಒಳಗೊಂಡಿದೆ. ಹಾಗೆಯೇ ಇದು ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಕಲರ್ ವೇರಿಯಂಟ್
ಆಯ್ಕೆಗಳನ್ನು ಪಡೆದುಕೊಂಡಿದೆ. ಹಾಗಾದರೆ ಒಪ್ಪೋ F33 5G ಮೊಬೈಲ್ ಸೇಲ್ ಡೇಟ್, ಬೆಲೆ, ಫೀಚರ್ಸ್ ಹಾಗೂ ಲಭ್ಯತೆಯ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ. Survey Thank you for completing the survey! Also Read : Samsung Galaxy S26 Ultra ಮತ್ತು Xiaomi 17 Ultra: ಖರೀದಿಗೆ ಯಾವುದು ಬೆಸ್ಟ್? Oppo F33 5G ಈಗ ಪ್ರಿ-ಆರ್ಡರ್‌ಗೆ ಲಭ್ಯ ನೂತನ ಒಪ್ಪೋ F33 5G ಸ್ಮಾರ್ಟ್‌ಫೋನ್ Pre-order ಗೆ ಲಭ್ಯವಿದೆ. ಈ ಫೋನ್ ಎರಡು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದುಕೊಂಡಿದೆ. ಈ ಮೊಬೈಲ್‌ನ 6GB RAM + 128GB ಸ್ಟೋರೇಜ್ ವೇರಿಯಂಟ್ ಬೆಲೆ 31,999 ರೂ.ಗಳು ಆಗಿದೆ. ಹಾಗೆಯೇ 8GB + 128GB ಸ್ಟೋರೇಜ್ ವೇರಿಯಂಟ್ ಬೆಲೆ 34,999 ರೂ.ಗಳು ಆಗಿದೆ. ಅದೇ ರೀತಿ 8GB + 256GB ವೇರಿಯಂಟ್ ಬೆಲೆಯು 37,999 ರೂ.ಗಳು ಆಗಿದೆ. ಈ ಫೋನಿಗೆ ಆಕರ್ಷಕ ಎಕ್ಸ್‌ಚೇಂಜ್ ಆಫರ್ ಸಹ ಇದೆ. ಅಂದಹಾಗೆ ಈ ಮೊಬೈಲ್ ಫಾರೆಸ್ಟ್ ಗ್ರೀನ್ ಮತ್ತು ಪರ್ಲ್ ವೈಟ್ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್, ಅಮೆಜಾನ್ ಮತ್ತು ಒಪ್ಪೋ ಆನ್‌ಲೈನ್ ಸ್ಟೋರ್ ಮೂಲಕ ಖರೀದಿಗೆ ಲಭ್ಯವಾಗಲಿದೆ. ಒಪ್ಪೋ F33 5G ಮೊಬೈಲ್ ಫೀಚರ್ಸ್ ಹೊಸ ಒಪ್ಪೋ F33 5G ಮೊಬೈಲ್ 6.57 ಇಂಚಿನ FHD+ AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್ 120Hz ವರೆಗೆ ರಿಫ್ರೆಶ್ ರೇಟ್ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 1,400 nits ಪೀಕ್ ಬ್ರೈಟ್ನೆಸ್ ಬೆಂಬಲ ಹೊಂದಿದೆ. ಇದರೊಂದಿಗೆ ಈ ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 6360 ಮ್ಯಾಕ್ಸ್ ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಧೂಳು ಮತ್ತು ನೀರಿನ ಪ್ರತಿರೋಧಕ್ಕಾಗಿ ಈ ಫೋನ್ IP66 + IP68 + IP69 ರೇಟಿಂಗ್ ಸಪೋರ್ಟ್ ಒಳಗೊಂಡಿದೆ. ಒಪ್ಪೋ F33 5G ಸ್ಮಾರ್ಟ್‌ಫೋನ್ ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸೆಟ್‌ಅಪ್ ಅನ್ನು ಪಡೆದುಕೊಂಡಿವೆ. ಇದರ ಮೊದಲ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಹಾಗೆಯೇ ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್ 16 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಹಾಗೆಯೇ ಈ ಮೊಬೈಲ್ 7,000mAh ಬ್ಯಾಟರಿ ಬ್ಯಾಕ್‌ಅಪ್ ಜೊತೆಗೆ 80W SuperVOOC ವೈರ್ಡ್ ಫಾಸ್ಟ್ ಚಾರ್ಜಿಂಗ್ ಅನ್ನು ಪಡೆದುಕೊಂಡಿದೆ.
