ನೂತನ Vivo T5 Pro 5G ಸ್ಮಾರ್ಟ್‌ಫೋನ್ ಆಕರ್ಷಕ ಫೀಚರ್ಸ್‌ ಮೂಲಕ ಈಗಾಗಲೇ ಮಾರುಕಟ್ಟೆಯಲ್ಲಿ ಸದ್ದು ಮಾಡಿದೆ. ಅಂದಹಾಗೆ ಈ ಮೊಬೈಲ್‌ ಇಂದು (ಏಪ್ರಿಲ್‌ 21 ರಂದು) ದೇಶೀಯ ಮಾರುಕಟ್ಟೆಯಲ್ಲಿ ಸೇಲ್‌ ಶುರು ಮಾಡಲಿದೆ. ಈ ಹೊಸ ಮೊಬೈಲ್‌ ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್‌ ಒಳಗೊಂಡಿರುವ ಜೊತೆಗೆ 9,020mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಪಡೆದುಕೊಂಡಿದೆ. ಅಲ್ಲದೇ ಈ ಮೊಬೈಲ್‌ನ ಡಿಸ್‌ಪ್ಲೇಯು 144Hz ವರೆಗೆ ರಿಫ್ರೆಶ್ ರೇಟ್‌ ಹೊಂದಿದೆ. ಹಾಗೆಯೇ ಈ ಫೋನ್‌ ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಗ್ಲೇಸಿಯರ್ ಬ್ಲೂ ಕಲರ್‌ ಆಯ್ಕೆಯೊಂದಿಗೆ ಎಂಟ್ರಿ ಕೊಟ್ಟಿದೆ. ಹಾಗಾದರೇ ವಿವೋ T5 ಪ್ರೊ 5G ಫೋನಿನ ಸೇಲ್‌, ಬೆಲೆ, ಫೀಚರ್ಸ್‌ಗಳ ಬಗ್ಗೆ ಇನ್ನಷ್ಟು ಮಾಹಿತಿ ಮುಂದೆ ತಿಳಿಯೋಣ. Survey Thank you for completing the survey! Also Read : Jio ಸಂಸ್ಥೆಯ ಈ ಪ್ಲಾನಿನಲ್ಲಿ ದಿನವೂ 2.5GB ಡೇಟಾ! ಬೆಲೆ ಜಸ್ಟ್‌ 399 ರೂ.ಗಳು Vivo T5 Pro 5G ಸೇಲ್ ಮಾಹಿತಿ ವಿವೋ T5 ಪ್ರೊ 5G ಸ್ಮಾರ್ಟ್‌ಫೋನ್‌ ಇಂದು (ಏಪ್ರಿಲ್‌ 21 ರಂದು) ಮಧ್ಯಾಹ್ನ 12 ರಂದು ಮಾರಾಟ ಪ್ರಾರಂಭ ಮಾಡಲಿದೆ. ಈ ಮೊಬೈಲ್‌ನ 8GB RAM + 128GB ಸ್ಟೋರೇಜ್ ವೇರಿಯಂಟ್‌ ಬೆಲೆ 29,999 ರೂ.ಗಳು ಆಗಿದೆ. ಹಾಗೆಯೇ 8GB RAM + 256GB ಸ್ಟೋರೇಜ್ ವೇರಿಯಂಟ್‌ ಬೆಲೆ 33,999 ರೂ.ಗಳು ಆಗಿದೆ. ಅದೇ ರೀತಿ 12GB RAM + 256GB ವೇರಿಯಂಟ್‌ ಬೆಲೆ 39,999 ರೂ.ಗಳು ಆಗಿದೆ. ಅಂದಹಾಗೆ ಈ ಮೊಬೈಲ್‌ ಕಾಸ್ಮಿಕ್ ಬ್ಲ್ಯಾಕ್‌ ಮತ್ತು ಗ್ಲೇಸಿಯರ್ ಬ್ಲೂ ಕಲರ್‌ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಇನ್ನು ಈ ಸ್ಮಾರ್ಟ್‌ಫೋನ್ ಫ್ಲಿಪ್‌ಕಾರ್ಟ್ ಮತ್ತು ವಿವೋ ಇಂಡಿಯಾ ಆನ್‌ಲೈನ್ ಸ್ಟೋರ್ ಮೂಲಕ ಮಾರಾಟಕ್ಕೆ ಬರಲಿದೆ. ವಿವೋ T5 ಪ್ರೊ 5G ಮೊಬೈಲ್‌ ಫೀಚರ್ಸ್‌ ನೂತನ ವಿವೋ T5 ಪ್ರೊ 5G ಮೊಬೈಲ್‌ 6.83 ಇಂಚಿನ 1.5K AMOLED ಡಿಸ್‌ಪ್ಲೇ ಅನ್ನು ಹೊಂದಿರುವ ಜೊತೆಗೆ ಇದರ ಸ್ಕ್ರೀನ್‌ 144Hz ವರೆಗೆ ರಿಫ್ರೆಶ್ ರೇಟ್‌ ಅನ್ನು ಪಡೆದಿದೆ. ಇದರ ಡಿಸ್‌ಪ್ಲೇಯು 5,000 nits ಪೀಕ್‌ ಬ್ರೈಟ್ನೆಸ್‌ ಸಪೋರ್ಟ್‌ ಪಡೆದುಕೊಂಡಿದೆ. ಇದರೊಂದಿಗೆ ಈ ಫೋನ್‌ ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 7s Gen 4 ಚಿಪ್‌ಸೆಟ್ ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದೆ. ಅಲ್ಲದೇ ಇದು ಆಂಡ್ರಾಯ್ಡ್ 16 ಆಧಾರಿತ ColorOS 16 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ ವಿವೋ T5 ಪ್ರೊ 5G ಮೊಬೈಲ್‌ ಹಿಂಭಾಗದಲ್ಲಿ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿವೆ. ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾಪಿಕ್ಸೆಲ್ ಸೋನಿ IMX882 ಸೆನ್ಸರ್ ಸಾಮರ್ಥ್ಯದಲ್ಲಿ ಇದೆ ಹಾಗೆಯೇ ಸೆಕೆಂಡರಿ ಕ್ಯಾಮೆರಾವು 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ರಚನೆ ಹೊಂದಿದೆ. ಇನ್ನು ಸೆಲ್ಫಿ ಮತ್ತು ವೀಡಿಯೊ ಕರೆಗಳಿಗಾಗಿ ಮುಂಭಾಗದಲ್ಲಿ ಈ ಮೊಬೈಲ್‌ 32 ಮೆಗಾಪಿಕ್ಸೆಲ್ ಕ್ಯಾಮೆರಾ ಪಡೆದುಕೊಂಡಿದೆ. ಹಾಗೆಯೇ ಈ ಮೊಬೈಲ್‌ 9,020mAh ಬ್ಯಾಟರಿ ಬ್ಯಾಕ್‌ಅಪ್‌ ಜೊತೆಗೆ 90W ವೈರ್ಡ್ ಫಾಸ್ಟ್ ಚಾರ್ಜಿಂಗ್‌ ಅನ್ನು ಪಡೆದುಕೊಂಡಿದೆ.